1
ಆದಿಕಾಂಡ 41:16
ಕನ್ನಡ ಸಮಕಾಲಿಕ ಅನುವಾದ
ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.
አወዳድር
{{ጥቅስ}} ያስሱ
2
ಆದಿಕಾಂಡ 41:38
ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.
3
ಆದಿಕಾಂಡ 41:39-40
ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.
4
ಆದಿಕಾಂಡ 41:52
ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.
5
ಆದಿಕಾಂಡ 41:51
ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.
ቤት
መጽሐፍ ቅዱስ
እቅዶች
ቪዲዮዎች