1
ಆದಿಕಾಂಡ 49:10
ಕನ್ನಡ ಸಮಕಾಲಿಕ ಅನುವಾದ
ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.
አወዳድር
{{ጥቅስ}} ያስሱ
2
ಆದಿಕಾಂಡ 49:22-23
“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ. ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.
3
ಆದಿಕಾಂಡ 49:24-25
ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ. ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು; ನಿನ್ನನ್ನು ಸರ್ವಶಕ್ತರಾದ ದೇವರು ಆಶೀರ್ವದಿಸಲಿ. ಆ ಆಶೀರ್ವಾದಗಳು ಪರಲೋಕದವುಗಳು. ಆ ಆಶೀರ್ವಾದಗಳು ಕೆಳಗಿನಾಳದಲ್ಲಿರುವವುಗಳು. ಅವು ಎದೆಯ ಹಾಗೂ ಗರ್ಭದ ಆಶೀರ್ವಾದಗಳು.
4
ಆದಿಕಾಂಡ 49:8-9
“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?
5
ಆದಿಕಾಂಡ 49:3-4
“ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ. ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.
ቤት
መጽሐፍ ቅዱስ
እቅዶች
ቪዲዮዎች