የYouVersion አርማ
የፍለጋ አዶ

ಆದಿ 8:21-22

ಆದಿ 8:21-22 IRVKAN

ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ. ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.