1
ಆದಿ 11:6-7
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
قارن
اكتشف ಆದಿ 11:6-7
2
ಆದಿ 11:4
ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
اكتشف ಆದಿ 11:4
3
ಆದಿ 11:9
ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
اكتشف ಆದಿ 11:9
4
ಆದಿ 11:1
ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.
اكتشف ಆದಿ 11:1
5
ಆದಿ 11:5
ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.
اكتشف ಆದಿ 11:5
6
ಆದಿ 11:8
ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.
اكتشف ಆದಿ 11:8
الصفحة الرئيسية
الكتاب المقدس
خطط
فيديوهات