ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.