ಆದಿ 11

11
ಬಾಬೆಲ್ ಗೋಪುರ ಮತ್ತು ಭಾಷಾಬೇಧ
1ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ. 2ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ #11:2 ಬಾಬಿಲೋನ್.ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.
3“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. 4ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. 6ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. 7ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
8ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. 9ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ #11:9 ಬಾಬಿಲೋನ್ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
ಶೇಮನ ವಂಶದವರ ಚರಿತ್ರೆ
10ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು. 11ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು.
12ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು. 13ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
14ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು. 15ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
16ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು. 17ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.
18ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು. 19ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.
20ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು. 21ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.
22ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು. 23ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.
24ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು. 25ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
26ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
ತೆರಹನ ವಂಶದವರ ಚರಿತ್ರೆ
27ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು. 28ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು. 29ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. 30ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.
31ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
32ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.

المحددات الحالية:

ಆದಿ 11: IRVKan

تمييز النص

شارك

نسخ

None

هل تريد حفظ أبرز أعمالك على جميع أجهزتك؟ قم بالتسجيل أو تسجيل الدخول