ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ; ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.