ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.