ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.