ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.