1
ಯೆಶಾಯ 41:10
ಕನ್ನಡ ಸತ್ಯವೇದವು J.V. (BSI)
ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
Compare
Explore ಯೆಶಾಯ 41:10
2
ಯೆಶಾಯ 41:13
ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
Explore ಯೆಶಾಯ 41:13
3
ಯೆಶಾಯ 41:11
ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು
Explore ಯೆಶಾಯ 41:11
4
ಯೆಶಾಯ 41:9
ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ
Explore ಯೆಶಾಯ 41:9
5
ಯೆಶಾಯ 41:12
ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.
Explore ಯೆಶಾಯ 41:12
6
ಯೆಶಾಯ 41:14
ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.
Explore ಯೆಶಾಯ 41:14
7
ಯೆಶಾಯ 41:8
ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ
Explore ಯೆಶಾಯ 41:8
8
ಯೆಶಾಯ 41:18
ಬೋಳುಗುಡ್ಡಗಳಲ್ಲಿ ನದಿಗಳನ್ನು, ತಗ್ಗುಗಳಲ್ಲಿ ಒರತೆಗಳನ್ನು ಹೊರಡಿಸಿ ಅರಣ್ಯವನ್ನು ಕೆರೆಯಾಗಿಯೂ ಮರುಭೂವಿುಯನ್ನು ಬುಗ್ಗೆಗಳಾಗಿಯೂ ಮಾಡುವೆನು.
Explore ಯೆಶಾಯ 41:18
9
ಯೆಶಾಯ 41:17
ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
Explore ಯೆಶಾಯ 41:17
10
ಯೆಶಾಯ 41:4
ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.
Explore ಯೆಶಾಯ 41:4
11
ಯೆಶಾಯ 41:19-20
ದೇವದಾರು ಕಸ್ತೂರಿಜಾಲಿ ಸುಗಂಧ ಒಲೀವ ಮರಗಳನ್ನು ಅಡವಿಯಲ್ಲಿ ನೆಡುವೆನು, ತುರಾಯಿ ತಪಸಿ ತಿಲಕ ವೃಕ್ಷಗಳನ್ನು ಅರಣ್ಯದಲ್ಲಿ ತೋಪಾಗಿ ಬೆಳೆಯಿಸುವೆನು; ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.
Explore ಯೆಶಾಯ 41:19-20
Home
Bible
Plans
Videos