1
ಯೆರೆಮೀಯ 17:7-8
ಕನ್ನಡ ಸತ್ಯವೇದವು J.V. (BSI)
ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು. ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.
Compare
Explore ಯೆರೆಮೀಯ 17:7-8
2
ಯೆರೆಮೀಯ 17:9
ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?
Explore ಯೆರೆಮೀಯ 17:9
3
ಯೆರೆಮೀಯ 17:10
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
Explore ಯೆರೆಮೀಯ 17:10
4
ಯೆರೆಮೀಯ 17:5-6
ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು. ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
Explore ಯೆರೆಮೀಯ 17:5-6
5
ಯೆರೆಮೀಯ 17:14
ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.
Explore ಯೆರೆಮೀಯ 17:14
Home
Bible
Plans
Videos