1
ಲೂಕ 2:11
ಕನ್ನಡ ಸತ್ಯವೇದವು J.V. (BSI)
ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
Compare
Explore ಲೂಕ 2:11
2
ಲೂಕ 2:10
ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.
Explore ಲೂಕ 2:10
3
ಲೂಕ 2:14
ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
Explore ಲೂಕ 2:14
4
ಲೂಕ 2:52
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು.
Explore ಲೂಕ 2:52
5
ಲೂಕ 2:12
ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.
Explore ಲೂಕ 2:12
6
ಲೂಕ 2:8-9
ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.
Explore ಲೂಕ 2:8-9
Home
Bible
Plans
Videos