ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ -
ಕರ್ತನ ದಾರಿಯನ್ನು ಸಿದ್ಧಮಾಡಿರಿ,
ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು,
ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು,
ಡೊಂಕಾಗಿರುವಂಥದು ನೀಟಾಗುವದು,
ಕೊರಕಲಾದ ದಾರಿಗಳು ಸಮವಾಗುವವು.
ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬದಾಗಿ
ಅಡವಿಯಲ್ಲಿ ಕೂಗುವವನ ಶಬ್ಧವದೆ ಎಂಬದೇ.