ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡ ಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಂಡನು. ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ಹೋಯಿತು.