1
ಮಲಾಕಿಯ 3:10
ಕನ್ನಡ ಸತ್ಯವೇದವು J.V. (BSI)
ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.
Compare
Explore ಮಲಾಕಿಯ 3:10
2
ಮಲಾಕಿಯ 3:11-12
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ. ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.
Explore ಮಲಾಕಿಯ 3:11-12
3
ಮಲಾಕಿಯ 3:17-18
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು. ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.
Explore ಮಲಾಕಿಯ 3:17-18
4
ಮಲಾಕಿಯ 3:1
ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.
Explore ಮಲಾಕಿಯ 3:1
Home
Bible
Plans
Videos