1
ಮತ್ತಾಯ 1:21
ಕನ್ನಡ ಸತ್ಯವೇದವು J.V. (BSI)
ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.
Compare
Explore ಮತ್ತಾಯ 1:21
2
ಮತ್ತಾಯ 1:23
ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.
Explore ಮತ್ತಾಯ 1:23
3
ಮತ್ತಾಯ 1:20
ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.
Explore ಮತ್ತಾಯ 1:20
4
ಮತ್ತಾಯ 1:18-19
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು. ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.
Explore ಮತ್ತಾಯ 1:18-19
Home
Bible
Plans
Videos