1
ಮತ್ತಾಯ 14:30-31
ಕನ್ನಡ ಸತ್ಯವೇದವು J.V. (BSI)
ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.
Compare
Explore ಮತ್ತಾಯ 14:30-31
2
ಮತ್ತಾಯ 14:30
ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು.
Explore ಮತ್ತಾಯ 14:30
3
ಮತ್ತಾಯ 14:27
ಕೂಡಲೆ ಯೇಸು ಮಾತಾಡಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.
Explore ಮತ್ತಾಯ 14:27
4
ಮತ್ತಾಯ 14:28-29
ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
Explore ಮತ್ತಾಯ 14:28-29
5
ಮತ್ತಾಯ 14:33
ಆಗ ದೋಣಿಯಲ್ಲಿದ್ದವರು - ನಿಜವಾಗಿ ನೀನು ದೇವಕುಮಾರನು ಎಂದು ಹೇಳಿ ಆತನಿಗೆ ನಮಸ್ಕರಿಸಿದರು.
Explore ಮತ್ತಾಯ 14:33
6
ಮತ್ತಾಯ 14:16-17
ಯೇಸು - ಅವರು ಹೋಗುವದು ಅಗತ್ಯವಿಲ್ಲ; ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕವರು - ನಮಗೆ ಇಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಮತ್ತೇನೂ ಇಲ್ಲ ಅನ್ನಲಾಗಿ
Explore ಮತ್ತಾಯ 14:16-17
7
ಮತ್ತಾಯ 14:18-19
ಆತನು - ಅವುಗಳನ್ನು ಇಲ್ಲಿ ನನಗೆ ತಂದುಕೊಡಿರಿ ಅಂದನು. ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.
Explore ಮತ್ತಾಯ 14:18-19
8
ಮತ್ತಾಯ 14:20
ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
Explore ಮತ್ತಾಯ 14:20
Home
Bible
Plans
Videos