1
ಮತ್ತಾಯ 16:24
ಕನ್ನಡ ಸತ್ಯವೇದವು J.V. (BSI)
ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.
Compare
Explore ಮತ್ತಾಯ 16:24
2
ಮತ್ತಾಯ 16:18
ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.
Explore ಮತ್ತಾಯ 16:18
3
ಮತ್ತಾಯ 16:19
ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.
Explore ಮತ್ತಾಯ 16:19
4
ಮತ್ತಾಯ 16:25
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.
Explore ಮತ್ತಾಯ 16:25
5
ಮತ್ತಾಯ 16:26
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?
Explore ಮತ್ತಾಯ 16:26
6
ಮತ್ತಾಯ 16:15-16
ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು - ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.
Explore ಮತ್ತಾಯ 16:15-16
7
ಮತ್ತಾಯ 16:17
ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.
Explore ಮತ್ತಾಯ 16:17
Home
Bible
Plans
Videos