1
ಮತ್ತಾಯ 18:20
ಕನ್ನಡ ಸತ್ಯವೇದವು J.V. (BSI)
ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.
Compare
Explore ಮತ್ತಾಯ 18:20
2
ಮತ್ತಾಯ 18:19
ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ.
Explore ಮತ್ತಾಯ 18:19
3
ಮತ್ತಾಯ 18:2-3
ಆತನು ಚಿಕ್ಕ ಮಗುವನ್ನು ಹತ್ತರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Explore ಮತ್ತಾಯ 18:2-3
4
ಮತ್ತಾಯ 18:4
ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು.
Explore ಮತ್ತಾಯ 18:4
5
ಮತ್ತಾಯ 18:5
ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು.
Explore ಮತ್ತಾಯ 18:5
6
ಮತ್ತಾಯ 18:18
ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀವು ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Explore ಮತ್ತಾಯ 18:18
7
ಮತ್ತಾಯ 18:35
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸಹೋದರನಿಗೆ ಮನಃಪೂರ್ವಕವಾಗಿ ಕ್ಷವಿುಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
Explore ಮತ್ತಾಯ 18:35
8
ಮತ್ತಾಯ 18:6
ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.
Explore ಮತ್ತಾಯ 18:6
9
ಮತ್ತಾಯ 18:12
ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ.
Explore ಮತ್ತಾಯ 18:12
Home
Bible
Plans
Videos