ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.