ನಿಮ್ಮಲ್ಲಿ ಹಾಗಿರಬಾರದು; ಆದರೆ ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು; ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ನಿಮ್ಮ ಆಳಾಗಿರಬೇಕು. ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.