ನೋಹನ ದಿವಸಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯೂ ಇರುವದು. ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು ಪ್ರಳಯದ ನೀರು ಬಂದು ಎಲ್ಲರನ್ನು ಬಡುಕೊಂಡುಹೋಗುವ ತನಕ ಏನೂ ತಿಳಿಯದೆ ಇದ್ದರಲ್ಲಾ. ಅದರಂತೆ ಮನುಷ್ಯಕುಮಾರನು ಪ್ರತ್ಯಕ್ಷನಾಗುವ ಕಾಲದಲ್ಲಿಯೂ ಇರುವದು.