1
ಮತ್ತಾಯ 5:15-16
ಕನ್ನಡ ಸತ್ಯವೇದವು J.V. (BSI)
ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು. ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
Compare
Explore ಮತ್ತಾಯ 5:15-16
2
ಮತ್ತಾಯ 5:14
ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.
Explore ಮತ್ತಾಯ 5:14
3
ಮತ್ತಾಯ 5:8
ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.
Explore ಮತ್ತಾಯ 5:8
4
ಮತ್ತಾಯ 5:6
ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.
Explore ಮತ್ತಾಯ 5:6
5
ಮತ್ತಾಯ 5:44
ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.
Explore ಮತ್ತಾಯ 5:44
6
ಮತ್ತಾಯ 5:3
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.
Explore ಮತ್ತಾಯ 5:3
7
ಮತ್ತಾಯ 5:9
ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.
Explore ಮತ್ತಾಯ 5:9
8
ಮತ್ತಾಯ 5:4
ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.
Explore ಮತ್ತಾಯ 5:4
9
ಮತ್ತಾಯ 5:10
ನೀತಿಯ ನಿವಿುತ್ತವಾಗಿ ಹಿಂಸೆಯನ್ನು ತಾಳಿಕೊಳ್ಳುವವರು ಧನ್ಯರು; ಪರಲೋಕರಾಜ್ಯವು ಅವರದು.
Explore ಮತ್ತಾಯ 5:10
10
ಮತ್ತಾಯ 5:7
ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.
Explore ಮತ್ತಾಯ 5:7
11
ಮತ್ತಾಯ 5:11-12
ನನ್ನ ನಿವಿುತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.
Explore ಮತ್ತಾಯ 5:11-12
12
ಮತ್ತಾಯ 5:5
ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.
Explore ಮತ್ತಾಯ 5:5
13
ಮತ್ತಾಯ 5:13
ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.
Explore ಮತ್ತಾಯ 5:13
14
ಮತ್ತಾಯ 5:48
ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.
Explore ಮತ್ತಾಯ 5:48
15
ಮತ್ತಾಯ 5:37
ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.
Explore ಮತ್ತಾಯ 5:37
16
ಮತ್ತಾಯ 5:38-39
ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗಿಸು ಅಂತ ಹೇಳಿಯದೆ ಎಂದು ಕೇಳಿದ್ದೀರಷ್ಟೆ. ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.
Explore ಮತ್ತಾಯ 5:38-39
17
ಮತ್ತಾಯ 5:29-30
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ. ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.
Explore ಮತ್ತಾಯ 5:29-30
Home
Bible
Plans
Videos