1
ಮತ್ತಾಯ 7:7
ಕನ್ನಡ ಸತ್ಯವೇದವು J.V. (BSI)
ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ನಿಮಗೆ ತೆರೆಯುವದು
Compare
Explore ಮತ್ತಾಯ 7:7
2
ಮತ್ತಾಯ 7:8
ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.
Explore ಮತ್ತಾಯ 7:8
3
ಮತ್ತಾಯ 7:24
ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.
Explore ಮತ್ತಾಯ 7:24
4
ಮತ್ತಾಯ 7:12
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.
Explore ಮತ್ತಾಯ 7:12
5
ಮತ್ತಾಯ 7:14
ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
Explore ಮತ್ತಾಯ 7:14
6
ಮತ್ತಾಯ 7:13
ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.
Explore ಮತ್ತಾಯ 7:13
7
ಮತ್ತಾಯ 7:10,11
ಮೀನು ಕೇಳಿದರೆ ಹಾವನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ.
Explore ಮತ್ತಾಯ 7:10,11
8
ಮತ್ತಾಯ 7:1-2
ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವದಿಲ್ಲ. ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
Explore ಮತ್ತಾಯ 7:1-2
9
ಮತ್ತಾಯ 7:26
ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು.
Explore ಮತ್ತಾಯ 7:26
10
ಮತ್ತಾಯ 7:3-4
ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ? ನೀನು ನಿನ್ನ ಸಹೋದರನಿಗೆ - ನಿನ್ನ ಕಣ್ಣಿನೊಳಗಿಂದ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದು ಹೇಗೆ? ನಿನ್ನ ಕಣ್ಣಿನಲ್ಲಿ ತೊಲೆಯದೆಯಲ್ಲಾ.
Explore ಮತ್ತಾಯ 7:3-4
11
ಮತ್ತಾಯ 7:15-16
ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ. ಅವರ ಫಲಗಳಿಂದ ಅವರನ್ನು ತಿಳುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷೇಹಣ್ಣುಗಳನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರಗಳನ್ನೂ ಕೊಯ್ಯುವದುಂಟೇ?
Explore ಮತ್ತಾಯ 7:15-16
12
ಮತ್ತಾಯ 7:17
ಹಾಗೆಯೇ ಒಳ್ಳೇ ಮರಗಳೆಲ್ಲಾ ಒಳ್ಳೇ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವದು.
Explore ಮತ್ತಾಯ 7:17
13
ಮತ್ತಾಯ 7:18
ಒಳ್ಳೇ ಮರವು ಕೆಟ್ಟ ಫಲವನ್ನು ಕೊಡಲಾರದು; ಹುಳುಕು ಮರವು ಒಳ್ಳೇ ಫಲವನ್ನು ಕೊಡಲಾರದು.
Explore ಮತ್ತಾಯ 7:18
14
ಮತ್ತಾಯ 7:19
ಒಳ್ಳೇ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.
Explore ಮತ್ತಾಯ 7:19
Home
Bible
Plans
Videos