ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ನಿಮಗೆ ನಿಜವಾಗಿ ಹೇಳುತ್ತೇನೆ, ಬೊಕ್ಕಸದಲ್ಲಿ ಹಾಕಿದವರೆಲ್ಲರಲ್ಲಿ ಈ ಬಡ ವಿಧವೆ ಹೆಚ್ಚು ಹಾಕಿದ್ದಾಳೆ. ಹೇಗೆಂದರೆ ಎಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಹಾಕಿದರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಹಾಕಿದಳು, ತನ್ನ ಜೀವನವನ್ನೇ ಕೊಟ್ಟುಬಿಟ್ಟಳು ಅಂದನು.