1
ಮಾರ್ಕ 13:13
ಕನ್ನಡ ಸತ್ಯವೇದವು J.V. (BSI)
ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.
Compare
Explore ಮಾರ್ಕ 13:13
2
ಮಾರ್ಕ 13:33
ಆ ಕಾಲವು ಯಾವಾಗ ಬರುವದೋ ನಿಮಗೆ ಗೊತ್ತಿಲ್ಲವಾದ್ದರಿಂದ ನೋಡಿಕೊಳ್ಳಿರಿ, ಜಾಗರೂಕರಾಗಿರಿ.
Explore ಮಾರ್ಕ 13:33
3
ಮಾರ್ಕ 13:11
ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.
Explore ಮಾರ್ಕ 13:11
4
ಮಾರ್ಕ 13:31
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
Explore ಮಾರ್ಕ 13:31
5
ಮಾರ್ಕ 13:32
ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು.
Explore ಮಾರ್ಕ 13:32
6
ಮಾರ್ಕ 13:7
ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವದು ಅಗತ್ಯ; ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Explore ಮಾರ್ಕ 13:7
7
ಮಾರ್ಕ 13:35-37
ಮನೇಯಜಮಾನನು ಸಂಜೆಯಲ್ಲೋ ಸರುಹೊತ್ತಿನಲ್ಲೋ ಕೋಳಿ ಕೂಗುವಾಗಲೋ ಮುಂಜಾನೆಯಲ್ಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ; ಅವನು ಏಕಾಏಕಿ ಬಂದು ನೀವು ನಿದ್ದೆ ಮಾಡುವದನ್ನು ಕಂಡಾನು. ನಾನು ನಿಮಗೆ ಹೇಳಿದ್ದನ್ನು ಎಲ್ಲರಿಗೂ ಹೇಳುತ್ತೇನೆ, ಎಚ್ಚರವಾಗಿರಿ ಅಂದನು.
Explore ಮಾರ್ಕ 13:35-37
8
ಮಾರ್ಕ 13:8
ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಭೂಕಂಪಗಳು ಅಲ್ಲಲ್ಲಿ ಆಗುವವು; ಬರಗಳು ಬರುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.
Explore ಮಾರ್ಕ 13:8
9
ಮಾರ್ಕ 13:10
ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
Explore ಮಾರ್ಕ 13:10
10
ಮಾರ್ಕ 13:6
ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು - ನಾನು ಕ್ರಿಸ್ತನು, ನಾನು ಕ್ರಿಸ್ತನು ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
Explore ಮಾರ್ಕ 13:6
11
ಮಾರ್ಕ 13:9
ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.
Explore ಮಾರ್ಕ 13:9
12
ಮಾರ್ಕ 13:22
ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
Explore ಮಾರ್ಕ 13:22
13
ಮಾರ್ಕ 13:24-25
ಇದಲ್ಲದೆ ಆ ದಿನಗಳಲ್ಲಿ ಆ ಸಂಕಟ ತೀರಿದ ಮೇಲೆ ಸೂರ್ಯನು ಕತ್ತಲಾಗಿ ಹೋಗುವನು; ಚಂದ್ರನು ಬೆಳಕುಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಉದುರುತ್ತಿರುವವು; ಆಕಾಶದಲ್ಲಿರುವ ಶಕ್ತಿಗಳು ಕದಲುವವು.
Explore ಮಾರ್ಕ 13:24-25
Home
Bible
Plans
Videos