1
ಮಾರ್ಕ 5:34
ಕನ್ನಡ ಸತ್ಯವೇದವು J.V. (BSI)
ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.
Compare
Explore ಮಾರ್ಕ 5:34
2
ಮಾರ್ಕ 5:25-26
ಆಗ ಹನ್ನೆರಡು ವರುಷದಿಂದ ರಕ್ತ ಕುಸುಮರೋಗವಿದ್ದ ಒಬ್ಬ ಹೆಂಗಸು ಬಂದಳು. ಆಕೆಯು ಅನೇಕ ವೈದ್ಯರಿಂದ ಬಹು ಕಷ್ಟವನ್ನು ಅನುಭವಿಸಿ ಕೈಯಲ್ಲಿದ್ದದ್ದನ್ನೆಲ್ಲಾ ಕಳಕೊಂಡರೂ ರೋಗವು ಹೆಚ್ಚುತ್ತಾ ಬಂದದ್ದೇ ಹೊರತು ಮತ್ತೇನು ಪ್ರಯೋಜನವನ್ನೂ ಹೊಂದಿರಲಿಲ್ಲ.
Explore ಮಾರ್ಕ 5:25-26
3
ಮಾರ್ಕ 5:29
ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು.
Explore ಮಾರ್ಕ 5:29
4
ಮಾರ್ಕ 5:41
ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.
Explore ಮಾರ್ಕ 5:41
5
ಮಾರ್ಕ 5:35-36
ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು - ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವದು? ಅಂದರು. ಅವರು ಆಡಿದ ಮಾತನ್ನು ಯೇಸು ಲಕ್ಷ್ಯಮಾಡದೆ ಸಭಾಮಂದಿರದ ಅಧಿಕಾರಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ ಎಂದು ಹೇಳಿದನು.
Explore ಮಾರ್ಕ 5:35-36
6
ಮಾರ್ಕ 5:8-9
ಯಾಕಂದರೆ - ಎಲಾ ದೆವ್ವಾ, ಇವನನ್ನು ಬಿಟ್ಟುಹೋಗು ಎಂದು ಯೇಸು ಹೇಲಿದನು. ಮತ್ತು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು; ಯಾಕಂದರೆ ನಾವು ಬಹು ಮಂದಿ ಇದ್ದೇವೆ ಎಂದು ಹೇಳಿ
Explore ಮಾರ್ಕ 5:8-9
Home
Bible
Plans
Videos