ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು - ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟು ಆ ಎರಡು ಮೀನುಗಳನ್ನೂ ಎಲ್ಲರಿಗೆ ಹಂಚಿಸಿದನು. ಅವರೆಲ್ಲರೂ ಊಟಮಾಡಿ ತೃಪ್ತರಾದರು. ರೊಟ್ಟಿತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.