1
ಜ್ಞಾನೋಕ್ತಿಗಳು 3:5-6
ಕನ್ನಡ ಸತ್ಯವೇದವು J.V. (BSI)
KANJV-BSI
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Compare
Explore ಜ್ಞಾನೋಕ್ತಿಗಳು 3:5-6
2
ಜ್ಞಾನೋಕ್ತಿಗಳು 3:7
ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
Explore ಜ್ಞಾನೋಕ್ತಿಗಳು 3:7
3
ಜ್ಞಾನೋಕ್ತಿಗಳು 3:9-10
ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು.
Explore ಜ್ಞಾನೋಕ್ತಿಗಳು 3:9-10
4
ಜ್ಞಾನೋಕ್ತಿಗಳು 3:3
ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ
Explore ಜ್ಞಾನೋಕ್ತಿಗಳು 3:3
5
ಜ್ಞಾನೋಕ್ತಿಗಳು 3:11-12
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ; ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
Explore ಜ್ಞಾನೋಕ್ತಿಗಳು 3:11-12
6
ಜ್ಞಾನೋಕ್ತಿಗಳು 3:1-2
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು. ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು.
Explore ಜ್ಞಾನೋಕ್ತಿಗಳು 3:1-2
7
ಜ್ಞಾನೋಕ್ತಿಗಳು 3:13-15
ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ
Explore ಜ್ಞಾನೋಕ್ತಿಗಳು 3:13-15
8
ಜ್ಞಾನೋಕ್ತಿಗಳು 3:27
ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
Explore ಜ್ಞಾನೋಕ್ತಿಗಳು 3:27
9
ಜ್ಞಾನೋಕ್ತಿಗಳು 3:19
ಯೆಹೋವನು ಜ್ಞಾನದ ಮೂಲಕ ಭೂವಿುಯನ್ನು ಸ್ಥಾಪಿಸಿ ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.
Explore ಜ್ಞಾನೋಕ್ತಿಗಳು 3:19
Home
Bible
Plans
Videos