1
ಕೀರ್ತನೆಗಳು 37:4
ಕನ್ನಡ ಸತ್ಯವೇದವು J.V. (BSI)
ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
Compare
Explore ಕೀರ್ತನೆಗಳು 37:4
2
ಕೀರ್ತನೆಗಳು 37:5
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
Explore ಕೀರ್ತನೆಗಳು 37:5
3
ಕೀರ್ತನೆಗಳು 37:7
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
Explore ಕೀರ್ತನೆಗಳು 37:7
4
ಕೀರ್ತನೆಗಳು 37:3
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
Explore ಕೀರ್ತನೆಗಳು 37:3
5
ಕೀರ್ತನೆಗಳು 37:23-24
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.
Explore ಕೀರ್ತನೆಗಳು 37:23-24
6
ಕೀರ್ತನೆಗಳು 37:6
ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
Explore ಕೀರ್ತನೆಗಳು 37:6
7
ಕೀರ್ತನೆಗಳು 37:8
ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
Explore ಕೀರ್ತನೆಗಳು 37:8
8
ಕೀರ್ತನೆಗಳು 37:25
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.
Explore ಕೀರ್ತನೆಗಳು 37:25
9
ಕೀರ್ತನೆಗಳು 37:1
ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.
Explore ಕೀರ್ತನೆಗಳು 37:1
Home
Bible
Plans
Videos