1
ಯೆಜೆಕಿಯೇಲನು 3:18
ಕನ್ನಡ ಸತ್ಯವೇದವು C.L. Bible (BSI)
ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.
Compare
Explore ಯೆಜೆಕಿಯೇಲನು 3:18
2
ಯೆಜೆಕಿಯೇಲನು 3:19
ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.
Explore ಯೆಜೆಕಿಯೇಲನು 3:19
3
ಯೆಜೆಕಿಯೇಲನು 3:17
“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.
Explore ಯೆಜೆಕಿಯೇಲನು 3:17
4
ಯೆಜೆಕಿಯೇಲನು 3:20
ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.
Explore ಯೆಜೆಕಿಯೇಲನು 3:20
Home
Bible
Plans
Videos