1
ಯೆಜೆಕಿಯೇಲನು 4:4-5
ಕನ್ನಡ ಸತ್ಯವೇದವು C.L. Bible (BSI)
“ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ. ಅವರು ಎಷ್ಟು ವರ್ಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ, ಮುನ್ನೂರತೊಂಬತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇಮಿಸಿದ್ದೇನೆ; ಅಷ್ಟು ದಿವಸ ಇಸ್ರಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.
Compare
Explore ಯೆಜೆಕಿಯೇಲನು 4:4-5
2
ಯೆಜೆಕಿಯೇಲನು 4:6
ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.
Explore ಯೆಜೆಕಿಯೇಲನು 4:6
3
ಯೆಜೆಕಿಯೇಲನು 4:9
“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.
Explore ಯೆಜೆಕಿಯೇಲನು 4:9
Home
Bible
Plans
Videos