1
ಆದಿಕಾಂಡ 37:5
ಕನ್ನಡ ಸತ್ಯವೇದವು C.L. Bible (BSI)
ಒಮ್ಮೆ ಜೋಸೆಫನಿಗೆ ಒಂದು ಕನಸು ಬಿತ್ತು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
Compare
Explore ಆದಿಕಾಂಡ 37:5
2
ಆದಿಕಾಂಡ 37:3
ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.
Explore ಆದಿಕಾಂಡ 37:3
3
ಆದಿಕಾಂಡ 37:4
ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.
Explore ಆದಿಕಾಂಡ 37:4
4
ಆದಿಕಾಂಡ 37:9
ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.
Explore ಆದಿಕಾಂಡ 37:9
5
ಆದಿಕಾಂಡ 37:11
ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.
Explore ಆದಿಕಾಂಡ 37:11
6
ಆದಿಕಾಂಡ 37:6-7
ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ ಕೇಳಿ; ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.
Explore ಆದಿಕಾಂಡ 37:6-7
7
ಆದಿಕಾಂಡ 37:20
ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Explore ಆದಿಕಾಂಡ 37:20
8
ಆದಿಕಾಂಡ 37:28
ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.
Explore ಆದಿಕಾಂಡ 37:28
9
ಆದಿಕಾಂಡ 37:19
ಅಗೋ ಆ ಕನಸುಗಾರ ಬರುತ್ತಾ ಇದ್ದಾನೆ!
Explore ಆದಿಕಾಂಡ 37:19
10
ಆದಿಕಾಂಡ 37:18
ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.
Explore ಆದಿಕಾಂಡ 37:18
11
ಆದಿಕಾಂಡ 37:22
ರಕ್ತಪಾತ ಕೂಡದು, ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವನಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ದಿಸಬೇಕೆಂಬ ಗುರಿ ರೂಬೇನನದಾಗಿತ್ತು.
Explore ಆದಿಕಾಂಡ 37:22
Home
Bible
Plans
Videos