1
ಯೆಶಾಯ 11:2-3
ಕನ್ನಡ ಸತ್ಯವೇದವು C.L. Bible (BSI)
ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ. ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.
Compare
Explore ಯೆಶಾಯ 11:2-3
2
ಯೆಶಾಯ 11:1
ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.
Explore ಯೆಶಾಯ 11:1
3
ಯೆಶಾಯ 11:4
ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.
Explore ಯೆಶಾಯ 11:4
4
ಯೆಶಾಯ 11:5
ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.
Explore ಯೆಶಾಯ 11:5
5
ಯೆಶಾಯ 11:9
ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.
Explore ಯೆಶಾಯ 11:9
6
ಯೆಶಾಯ 11:6
ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.
Explore ಯೆಶಾಯ 11:6
7
ಯೆಶಾಯ 11:10
ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.
Explore ಯೆಶಾಯ 11:10
Home
Bible
Plans
Videos