“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು. ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.