ಆ ಶಾಪ ಈಡೇರುವಂತೆ ಮಾಡಿದ್ದಾನೆ. ನೀವು ಆತನ ವಾಣಿಗೆ ಕಿವಿಗೊಡದೆ ಪಾಪಮಾಡಿದ್ದರಿಂದ ಇದು ನಿಮಗೆ ಸಂಭವಿಸಿದೆ. ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.