1
ಯೆರೆಮೀಯ 42:6
ಕನ್ನಡ ಸತ್ಯವೇದವು C.L. Bible (BSI)
ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.
Compare
Explore ಯೆರೆಮೀಯ 42:6
2
ಯೆರೆಮೀಯ 42:11-12
ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನಾನು ನಿಮಗೆ ಕರುಣೆತೋರಿಸುವೆನು. ಅವನು ನಿಮ್ಮ ಮೇಲೆ ಮನಮರುಗಿ ಸ್ವಂತ ನಾಡಿಗೆ ಹೋಗಲುಬಿಡುವಂತೆ ಮಾಡುವೆನು.
Explore ಯೆರೆಮೀಯ 42:11-12
3
ಯೆರೆಮೀಯ 42:3
ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.
Explore ಯೆರೆಮೀಯ 42:3
Home
Bible
Plans
Videos