ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.