1
ಲೂಕ. 23:34
ಕನ್ನಡ ಸತ್ಯವೇದವು C.L. Bible (BSI)
ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.
Compare
Explore ಲೂಕ. 23:34
2
ಲೂಕ. 23:43
ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
Explore ಲೂಕ. 23:43
3
ಲೂಕ. 23:42
ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.
Explore ಲೂಕ. 23:42
4
ಲೂಕ. 23:46
ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.
Explore ಲೂಕ. 23:46
5
ಲೂಕ. 23:33
‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.
Explore ಲೂಕ. 23:33
6
ಲೂಕ. 23:44-45
ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು. ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು.
Explore ಲೂಕ. 23:44-45
7
ಲೂಕ. 23:47
ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.
Explore ಲೂಕ. 23:47
Home
Bible
Plans
Videos