1
ಮತ್ತಾಯ 4:4
ಕನ್ನಡ ಸತ್ಯವೇದವು C.L. Bible (BSI)
ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.
Compare
Explore ಮತ್ತಾಯ 4:4
2
ಮತ್ತಾಯ 4:10
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.
Explore ಮತ್ತಾಯ 4:10
3
ಮತ್ತಾಯ 4:7
ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.
Explore ಮತ್ತಾಯ 4:7
4
ಮತ್ತಾಯ 4:1-2
ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು. ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.
Explore ಮತ್ತಾಯ 4:1-2
5
ಮತ್ತಾಯ 4:19-20
“ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು. ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Explore ಮತ್ತಾಯ 4:19-20
6
ಮತ್ತಾಯ 4:17
ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.
Explore ಮತ್ತಾಯ 4:17
Home
Bible
Plans
Videos