“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”