ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.