1
ಮಾರ್ಕ 13:13
ಕನ್ನಡ ಸತ್ಯವೇದವು C.L. Bible (BSI)
ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.
Compare
Explore ಮಾರ್ಕ 13:13
2
ಮಾರ್ಕ 13:33
ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ.
Explore ಮಾರ್ಕ 13:33
3
ಮಾರ್ಕ 13:11
ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.
Explore ಮಾರ್ಕ 13:11
4
ಮಾರ್ಕ 13:31
ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.
Explore ಮಾರ್ಕ 13:31
5
ಮಾರ್ಕ 13:32
“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.
Explore ಮಾರ್ಕ 13:32
6
ಮಾರ್ಕ 13:7
ಇದಲ್ಲದೆ, ರಣಕಹಳೆಗಳನ್ನೂ ಸಮರಸುದ್ದಿಗಳನ್ನೂ ಕೇಳುವಿರಿ. ಆಗ ನೀವು ಕಳವಳಪಡಬೇಡಿ. ಇವೆಲ್ಲವೂ ಸಂಭವಿಸಲೇಬೇಕು. ಆದರೂ ಇದಿನ್ನೂ ಅಂತ್ಯಕಾಲವಲ್ಲ
Explore ಮಾರ್ಕ 13:7
7
ಮಾರ್ಕ 13:35-37
ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು. ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು! ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.
Explore ಮಾರ್ಕ 13:35-37
8
ಮಾರ್ಕ 13:8
ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.
Explore ಮಾರ್ಕ 13:8
9
ಮಾರ್ಕ 13:10
ಈ ಮೊದಲು ಎಲ್ಲಾ ಜನಾಂಗಗಳಿಗೆ ಶುಭಸಂದೇಶವನ್ನು ಪ್ರಕಟಿಸಬೇಕಾಗಿದೆ.
Explore ಮಾರ್ಕ 13:10
10
ಮಾರ್ಕ 13:6
ಅನೇಕರು ನನ್ನ ಹೆಸರನ್ನು ಇಟ್ಟುಕೊಂಡು ಬಂದು, ‘ನಾನೇ ಕ್ರಿಸ್ತ’, ‘ನಾನೇ ಕ್ರಿಸ್ತ’ ಎನ್ನುತ್ತಾ ಎಷ್ಟೋ ಜನರನ್ನು ತಪ್ಪುದಾರಿಗೆ ಎಳೆಯುವರು.
Explore ಮಾರ್ಕ 13:6
11
ಮಾರ್ಕ 13:9
“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.
Explore ಮಾರ್ಕ 13:9
12
ಮಾರ್ಕ 13:22
ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.
Explore ಮಾರ್ಕ 13:22
13
ಮಾರ್ಕ 13:24-25
“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.
Explore ಮಾರ್ಕ 13:24-25
Home
Bible
Plans
Videos