ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು. ಎಲ್ಲರೂ ಹೊಟ್ಟೆತುಂಬಾ ತಿಂದು ತೃಪ್ತರಾದರು. ಇನ್ನೂ ಉಳಿದಿದ್ದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು.