1
ಮಾರ್ಕ 9:23
ಕನ್ನಡ ಸತ್ಯವೇದವು C.L. Bible (BSI)
ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.
Compare
Explore ಮಾರ್ಕ 9:23
2
ಮಾರ್ಕ 9:24
ಆಗ ಆ ಬಾಲಕನ ತಂದೆ, “ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ,” ಎಂದು ಯೇಸುವಿಗೆ ಮೊರೆಯಿಟ್ಟನು.
Explore ಮಾರ್ಕ 9:24
3
ಮಾರ್ಕ 9:28-29
ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು, “ಈ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ,” ಎಂದರು.
Explore ಮಾರ್ಕ 9:28-29
4
ಮಾರ್ಕ 9:50
ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.
Explore ಮಾರ್ಕ 9:50
5
ಮಾರ್ಕ 9:37
“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.
Explore ಮಾರ್ಕ 9:37
6
ಮಾರ್ಕ 9:41
ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
Explore ಮಾರ್ಕ 9:41
7
ಮಾರ್ಕ 9:42
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು.
Explore ಮಾರ್ಕ 9:42
8
ಮಾರ್ಕ 9:47
ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.
Explore ಮಾರ್ಕ 9:47
Home
Bible
Plans
Videos