ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.