ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು. ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು