1
1 ಸಮು 7:12
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.
Compare
Explore 1 ಸಮು 7:12
2
1 ಸಮು 7:3
ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
Explore 1 ಸಮು 7:3
3
1 ಸಮು 7:4
ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.
Explore 1 ಸಮು 7:4
Home
Bible
Plans
Videos