ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು. ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.